Tuesday, September 16, 2025

Latest Posts

ಮೋದಿಗೆ ಬೈಯಲು ಹೈಕಮಾಂಡ್ ಆರ್ಡರ್ ಆಗಿದೆ: ಸಂತೋಷ್ ಲಾಡ್ ಹೇಳಿದ್ದಾಗಿ ಪ್ರಲ್ಹಾದ್ ಜೋಶಿ ಹೇಳಿಕೆ

- Advertisement -

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್ ಹೇಳಿದ್ದಾಗಿ ಜೋಶಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, ವಿಮಾನದಲ್ಲಿ ನಾನು ಮತ್ತು ಸಂತೋಷ್ ಲಾಡ್ ಒಟ್ಟಿಗೆ ಬರುತ್ತಿದ್ದಾಗ, ಯಾಕಪ್ಪಾ ನನ್ನ ಮತ್ತು ಮೋದಿ ವಿರುದ್ಧ ಟೀಕೆ ಮಡುತ್ತಿದ್ದಿಯಾಲ್ಲ, ನನ್ನನ್ನು ಬೈದರೆ ಸರಿ, ಮೋದಿಗೆ ಯಾಕೆ ಟೀಕೆ ಮಾಡುತ್ತಿದ್ದಿಯಾ ಎಂದು ಸಂತೋಷ್ ಲಾಡ್ ಅವರನ್ನು ಕೇಳಿದೆ. ಅದಕ್ಕೆ ಸಂತೋಷ್ ಲಾಡ್ ಹಿಂದಿಯಲ್ಲಿ, ಬೈಯದೆ ಇದ್ದರೆ ನನ್ನ ನೌಕರಿ ಹೋಗುತ್ತೆ. ಈ ಬಗ್ಗೆ ಹೈಕಮಾಂಡ್ ಆರ್ಡರ್ ಆಗಿದೆ. ಆವಾಗಿನಿಂದ ನಾನು ತಲೆಕೆಡಿಸಿಕೊಂಡಿಲ್ಲ, ನೀವೂ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಜೋಶಿ ಹೇಳುವುದನ್ನು ಕೇಳಬಹುದು.

ಇದು ಆರ್‌ಸಿಬಿಯ ಹೊಸ ಅಧ್ಯಾಯ: ಕನ್ನಡದಲ್ಲೇ ಹೇಳಿದ ವಿರಾಟ್ ಕೊಹ್ಲಿ..

ಶಾಲೆಯಿಂದ ಬರುತ್ತಿದ ಬಾಲಕಿ ಮೇಲೆ ರಸ್ತೆಯಲ್ಲೇ ಲೈಂ*ಗಿಕ ಕಿರುಕುಳ: ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

ಸ್ಟ್ರಾಬೇರಿ ತಿಂದು 8 ವರ್ಷದ ಬಾಲಕ ಸಾವು..

- Advertisement -

Latest Posts

Don't Miss