Sunday, May 26, 2024

Latest Posts

ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿ ಪ್ರಲ್ಹಾದ್ ಜೋಶಿ ಅವರ ಕೈವಾಡವಿಲ್ಲ: ಮಾಜಿ ಸಿಎಂ ಯಡಿಯೂರಪ್ಪ

- Advertisement -

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಬಿ‌.ಎಸ್.ಯಡಿಯೂರಪ್ಪ ಅವರು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲಾವಣೆ ಮಾಡಬೇಕೆಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿ ಪ್ರಲ್ಹಾದ್ ಜೋಶಿ ಅವರ ಕೈವಾಡವಿಲ್ಲ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ, ಈ ಬಗ್ಗೆ ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.

ಪ್ರಲ್ಹಾದ್ ಜೋಶಿ ಎಲ್ಲ ಸಮುದಾಯವನ್ನು ಒಟ್ಟಿಗೆ ತಗೊಂಡು ಹೋಗುವ ನಾಯಕರು, ಅಲ್ಲದೇ ಅವರ ನಾಯಕತ್ವ ದೇಶ ನೋಡುತ್ತಿದೆ‌. ಇದೀಗ ಮಠಾಧಿಪತಿಗಳಿಗೆ ತಪ್ಪು ಗ್ರಹಿಕೆ ಆಗಿದೆ. ಅವರ ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು‌.

ಈಗಾಗಲೇ ದಾವಣಗೆರೆಗೆ ಹೋಗಿ ಅಲ್ಲಿನ ಅಸಮಾಧಾನ ಪರಿಹರಿಸಿದ್ದೇನೆ. ಅದರಂತೆ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರ ವಿರುದ್ಧದ ಅಸಮಾಧಾನ ಪರಿಹರಿಸಲಾಗಿದೆ. ಪಕ್ಷದಲ್ಲಿ ಕೆಲವು ಗೊಂದಲವಿರೋದು ನಿಜ, ಆದರೆ ಅವೆಲ್ಲವನ್ನೂ ಪರಿಹರಿಸಿಕೊಂಡು, ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ಬಿಟ್ಟು ಉಳಿದೆಲ್ಲ, ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆಯಾಗಿದೆ. ಬಿಜೆಪಿ, ಜೆಡಿಎಸ್ ಪರವಾದ ವಾತಾವರಣ ರಾಜ್ಯದಲ್ಲಿದೆ. ಕಾಂಗ್ರೆಸ್ ಕೇವಲ ಗ್ಯಾರಂಟಿ ಬಗ್ಗೆ ಮಾತನಾಡಿ ವಿಫಲವಾಗಿದೆ. ಕಾಂಗ್ರೆಸ್ ರೈತ ವಿರೋಧಿ, ದಲಿತ ವಿರೋಧಿ ಸರ್ಕಾರವಾಗಿದೆ ಎಂದು ಹರಿಹಾಯ್ದರು.

ಕೋಲಾರ ಸಿದ್ದರಾಮಯ್ಯ ನಾಟಕ ಮಂಡಳಿಯಿಂದ ಹೊಸ ನಾಟಕ “ರಾಜೀನಾಮೆ ಹೈಡ್ರಾಮಾ”: ಪ್ರೀತಂಗೌಡ ವ್ಯಂಗ್ಯ

ಮೈಮೇಲೆ Rs.500/- ನೋಟು ಇಟ್ಟು ಮಲಗಿದ ರಾಜಕಾರಣಿ ಫೋಟೋ ವೈರಲ್.. ಆದರೆ ಸತ್ಯವೇ ಬೇರೆ..

ಮೆದುಳು ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಜಗ್ಗಿ ವಾಸುದೇವ್ ಗುರೂಜಿ

- Advertisement -

Latest Posts

Don't Miss