ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್ ಜೊತೆ ಪ್ರಹ್ಲಾದ್ ಜೋಶಿ ಉತ್ತಮ ಸಂಪರ್ಕ ಹೊಂದಿರುವುದರಿಂದ ಇವರ ಮುಖಾಂತರ ಹೋದರೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಯಾದಗಿರಿ, ಗುರುಮಿಠಕಲ್, ಗಂಗಾವತಿ, ರೋಣ ಸೇರಿದಂತೆ ಅನೇಕ ಕ್ಷೇತ್ರಗಳಿಂದ ಕಾರ್ಯಕರ್ತರೊಂದಿಗೆ ಆಗಮಿಸಿ ಮುಖಂಡರುಗಳು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ.
ಸೊಗಸಾಗಿದೆ “MR ಬ್ಯಾಚುಲರ್” ಚಿತ್ರದ ಹಾಡು.
ರಾತ್ರಿ 11ರ ನಂತರ ಜನರನ್ನು ರಸ್ತೆಗಿಳಿಸುವುದಿಲ್ಲ ಎಂದು ದಂಪತಿಯಿಂದ ಹಣ ವಸೂಲಿ : ಇಬ್ಬರು ಕಾನ್‌ಸ್ಟೆಬಲ್‌ಗಳ ಅಮಾನತು




