ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ಮಹಾಮಂಗಳಾರತಿ ಪಡೆದ ನಂತರ ಮಾತನಾಡಿದ ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಸ್ಲೀಂ ಸಮುದಾಯದ ಅಂಜುಮನ್ ಸಂಸ್ಥೆಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡದಕ್ಕಾಗಿ ಮುಸ್ಲೀಂ ಮುಖಂಡರು ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಮುಸ್ಲೀಂ ಸಮುದಾಯದವರ ವಿರುದ್ದ ಹೇಳಿಕೆ ನೀಡಿದ್ದಕ್ಕಾಗಿ ಮುತಾಲಿಕ್ ವಿರುದ್ದ ಕಾನೂನು ಕ್ರಮ ತೆಗೆದುಕೊಂಡು ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಮುಸ್ಲಿಂ ಮುಖಂಡ ಅಶಫಾಕ್ ಕುಮಠಾಕರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದರು.
ಅವರ ಹೇಳಿಕೆಯಿಂದ ಎಷ್ಟೋ ಸಮುದಾಯದ ಭಾವನೆಗಳಿಗೆ ದಕ್ಕೆಯಾಗಿದ್ದು ಅವರಿಗೆ ಅರಿವಿಲ್ಲ. ಮಸೀದಿಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ ಎಂಬ ಪ್ರಚೋದನಕಾರಿ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮುತಾಲಕ್ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಅವರ ವಿರುದ್ದ ಸರಿಯಾದ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಮತ್ತು ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಹು-ಧಾ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಮುತಾಲಿಕ್ ಹೇಳಿಕೆ ನೀಡಿದ ಬೆನ್ನಲ್ಲೆ ಸ್ವಯಂ ಪ್ರೇರಿತವಾಗಿ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಹೇಳಿದ್ದಾರೆ. ಮುತಾಲಿಕ್ ಹೇಳಿಕೆ ಕುರಿತಂತೆ ಅಂಜುಮನ್ ಹಾಗೂ ಮುಸ್ಲಿಂ ಬಾಂಧವರಿಂದ ದೂರು ನೀಡಲಾಗಿದೆ ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
BanneruGatta; ಚಿರತೆಗಳ ಸರಣಿ ಸಾವು ತಪ್ಪಿಸಲು ಹೈ ಅಲರ್ಟ್ ಘೋಷಿಸಿದ ಸಚಿವರು..!
ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮುತಾಲಿಕ್ ವಿರುದ್ದ ದೂರು ದಾಖಲು..!
Chandrayana Ganesh; ಮದಿಹಾಳದಲ್ಲಿ ಪ್ರತಿಷ್ಠಾಪನೆಗೊಂಡಿದೆ ಚಂದ್ರಯಾನ-3 ಗಣಪತಿ