ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು.
ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಮಾಹಾನಗರ ಪಾಲಿಕೆ ಅವಕಾಶ ಕೊಟ್ಟಿತ್ತು. ಕೆಲ ಷರತ್ತು ಕೂಡ ಹಾಕಿತ್ತು. ಅದರಂತೆ ಇಂದು 12 ಗಂಟೆಯೊಳಗೆ ಈದ್ಗಾ ಮೈದಾನದಿಂದ ಗಣೇಶ ಹೊರ ಬರಬೇಕು ಎನ್ನುವ ಷರತ್ತು ಹಾಕಲಾಗಿತ್ತು. ಸರಿಯಾಗಿ 11.45 ಕ್ಕೆ ಈದ್ಗಾ ಮೈದಾನದಿಂದ ಗಣೇಶನನ್ನ ಹೊರಗೆ ತರಲಾಯ್ತು.
ಇದಕ್ಕೂ ಮೊದಲು ಮಹಾಮಂಗಳಾರತಿಯಲ್ಲಿ ಪಾಲ್ಗೊಂಡ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮಗಳ ಮಾತನಾಡಿದ ಅವರು, ‘ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ. ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಎಂದು ವಾಗ್ದಾಳಿ ನಡೆಸಿದರು.
ಫಿರ್ಯಾದಿದಾರರು ಕರ್ತವ್ಯ ನಿರ್ವಹಿಸುವ ವಲಯ ಕಛೇರಿ 8 ರ ವ್ಯಾಪ್ತಿಗೆ ಬರುವ ಪಾಲಿಕೆ ಒಡೆತನದ ಸಿಟಿ ಸರ್ವೆ ನಂ. 174 (ಹುಬ್ಬಳ್ಳಿ ಈದಾ ಮೈದಾನ) ಜಾಗೆಯಲ್ಲಿ ಈ ದಿವಸ ದಿನಾಂಕ : 21.09.2023 ರಂದು 11-30 ಗಂಟೆ ಸುಮಾರಿಗೆ ಸಾರ್ವಜನಿಕವಾಗಿ ಸ್ಥಾಪಿಸಿದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ಕೆ ಆಗಮಿಸಿದ್ದ, ಇದರಲ್ಲಿ ಆರೋಪಿತರಾದ ಶ್ರೀರಾಮ ಸೇನೆಯ ಅಧ್ಯಕ್ಷರಾದ ಪ್ರಮೋದ ಮುತಾಲಿಕ್ ಇವರು ಇತರ ಧರ್ಮದ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಅಪರಾಧದ ಹಿನ್ನೆಲೆ ಪ್ರಕರಣ ದಾಖಲಾಗಿದೆ.
Chandrayana Ganesh; ಮದಿಹಾಳದಲ್ಲಿ ಪ್ರತಿಷ್ಠಾಪನೆಗೊಂಡಿದೆ ಚಂದ್ರಯಾನ-3 ಗಣಪತಿ
Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!
Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!