Tuesday, September 23, 2025

Latest Posts

ದಸರಾ ಉದ್ಘಾಟನೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಸಿಂಹ !

- Advertisement -

ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್‌ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್‌ರನ್ನು ಘೋಷಿಸಿದಾಗಿನಿಂದಲೂ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರೋಧ ವ್ಯಕ್ತೊಡಿಸಿದ್ದರು. ಅವರ ವಿರುದ್ಧ ಕಿಡಿಕಾರಿದ್ದರು. ಇದೀಗ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್‌ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ‘ಬಾನು ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ.

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss