Friday, July 18, 2025

Latest Posts

Haveri News: ಹಾಡು ಹಗಲೇ ನಡುರಸ್ತೆಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಹ*ತ್ಯೆ

- Advertisement -

Haveri News: ಹಾವೇರಿ: ಹಾಡು ಹಗಲೇ ಪ್ರಥಮ ದರ್ಜೆಯ ಗುತ್ತಿಗೆದಾರನ ಹತ್ಯೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಶಿವಾನಂದ ಕುನ್ನೂರು (40) ಎಂಬ ಪ್ರಥಮ ದರ್ಜೆ ಗುತ್ತಿಗೆದಾರನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಸ್ತಿ ವಿಚಾರಕ್ಕೆ ಹತ್ಯೆ ನಡೆದಿರುವ ಶಂಕೆ ಇದೆ. ಸಂಬಂಧಿಕರೇ, ಸುಪಾರಿ ನೀಡಿ, ಹತ್ಯೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ.

ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಶಿಗ್ಗಾಂವಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ‌ನಡೆಸಿದ್ದಾರೆ.

- Advertisement -

Latest Posts

Don't Miss