ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು?
ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ. ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು. ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಇದಕ್ಕೆ ರಿಟ್ವೀಟ್ ಮಾಡಿಿರುವ ಪ್ರತಾಪ್ ಸಿಂಹ, ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? ಎಂದು ಪ್ರಶ್ನಿಸಿದ್ದಾರೆ.
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? https://t.co/e7DP2HFTNR
— Pratap Simha (@mepratap) April 18, 2023
ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ.
ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ.ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು?
1/2— Siddaramaiah (@siddaramaiah) April 18, 2023