Saturday, May 10, 2025

Latest Posts

ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ 43 ಪರೀಕ್ಷಾ ಕೇಂದ್ರಗಳ ಸಿದ್ಧತೆ: ಡಿಸಿ ದಿವ್ಯ ಪ್ರಭು

- Advertisement -

Dharwad News: ಧಾರವಾಡ: ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯದಂತ ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಗಂಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕಲಾ ವಿಭಾಗ, ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಸೇರಿದಂತೆ ಒಟ್ಟು 26,411 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಧಾರವಾಡ, ಹುಬ್ಬಳ್ಳಿ. ಕಲಘಟಗಿ, ಕುಂದಗೋಳ, ನವಲಗುಂದ ಸೇರಿದಂತೆ 12,704 ಗಂಡು ಮಕ್ಕಳು, 12,707 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

‘ಚಹಾ ಮಾರುವವರೇ ಪ್ರಧಾನಿಯಾಗಿರ್ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲ’

ಆರ್ಸಿಬಿ ಆಟಗಾರ್ತಿಗೆ ಪ್ರಪೋಸ್ ಮಾಡಿದ ಅಭಿಮಾನಿ..

ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಲು ಹಿಮಾಚಲ ಪ್ರದೇಶಕ್ಕೆ ಡಿಸಿಎಂ ಡಿಕೆಶಿ ದೌಡು

- Advertisement -

Latest Posts

Don't Miss