ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಪದಗ್ರಹಣ ಮತ್ತು ಡಿಕೆಶಿ ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.
ನಾಳಿನ ಸಮಾರಂಭಕ್ಕೆ ಕರ್ನಾಟಕದ ರಾಜಕೀಯ ವ್ಯಕ್ತಿಗಳು ಸೇರಿ, 8 ರಾಜ್ಯದ ಸಿಎಂಗಳು, ಕಾಂಗ್ರೆಸ್ ರಾಷ್ಟ್ರೀಯ ನಾಯಕರೆಲ್ಲ ಆಗಮಿಸುತ್ತಿದ್ದಾರೆ. ಇವರಿಗೆ Z+ ಸೆಕ್ಯೂರಿಟಿ ನೀಡಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತ ಪೊಲೀಸ್ ಬಿಗಿ ಭದ್ರತೆ ಇರಿಸಲಾಗಿದೆ. 2 ಗೇಟ್‌ಗಳಲ್ಲಿ ವಿವಿಐಪಿಗಳಿಗೆ ಎಂಟ್ರಿ ನೀಡಲಾಗುತ್ತಿದ್ದು, ವಿವಿಐಪಿಗಳ ವಾಹನ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಇಬ್ಬರು ಜಂಟಿ ಪೊಲೀಸ್ ಆಯುಕ್ತರು,8 ಡಿಸಿಪಿ, 10 ಎಸಿಪಿ, 28 ಇನ್ಸ್‌ಪೆಕ್ಟರ್‌ಗಳು, 1,500ಕ್ಕೂ ಹೆಚ್ಚು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ನೇಮಿಸಲಾಗಿದ್ದು, 500 ಸಂಚಾರಿ ಪೊಲೀಸರನ್ನ ನೇಮಕ ಮಾಡಲಾಗಿದೆ.
ಇನ್ನು ಕಾರ್ಯಕ್ರಮಕ್ಕೆ 2 ಲಕ್ಷ ಜನ ಆಗಮಿಸುವ ಸಾಧ್ಯತೆ ಇದ್ದು, 1 ಲಕ್ಷಕ್ಕೂ ಹೆಚ್ಚು ಜನರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಬಿಹಾರ ಸಿಎಂ ನಿತೀಶ್ ಕುಮಾರ್, ಜಾರ್ಖಂಡ್ ಸಿಎಂ ಹೇಮಂತ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಸ್ಟಾಲಿನ್, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್, ಛತ್ತೀಸ್‌ಘಡ ಸಿಎಂ ಭೂಪೇಶ್ ಭಗೇಲ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರಿದ ಸಿದ್ದರಾಮಯ್ಯ, ಡಿಕೆಶಿ