Saturday, July 20, 2024

Latest Posts

ರಾಷ್ಟ್ರಪತಿಗಳ ಆಗಮನ ಹಿನ್ನೆಲೆ –ಯಳಂದೂರು ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ..!

- Advertisement -

www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು.

ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ ಹೊರವಲಯದ ಜಮೀನಿನಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಿದ್ದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಚಿವ ಎಸ್ ಟಿ . ಸೋಮಶೇಖರ್ ಬಿಗಿ ಭದ್ರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಾದ್ಯಮದವರೊಡನೆ ಮಾತನಾಡಿ ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗಿ ದೇವರ ದರ್ಶನ ಪಡೆದ ನಂತರ ಚಾಮರಾಜನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.  

ಮುಖ್ಯಮಂತ್ರಿಗಳು ಚಾಮರಾಜನಗರಕ್ಕೆ ಆಗಮಿಸುವರೋ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಬಿಳಿಗಿರಿರಂಗನ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಆಗಮಿಸುವುದಿಲ್ಲ ಕಾರಣ ದಸರಾ ಉದ್ಘಾಟನೆಯಲ್ಲಿ ಭಾಗಿಯಾಗುವುದರಿಂದ ಮಧ್ಯಾಹ್ನದ ಸಮಯಕ್ಕೆ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ

- Advertisement -

Latest Posts

Don't Miss