Friday, April 4, 2025

Latest Posts

ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರಧಾನ; ಗಣ್ಯರು ಭಾಗಿ

- Advertisement -

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ಹುಬ್ಬಳ್ಳಿಯ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ, ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಅಧ್ಯಕ್ಷರಾದ ಆಯೇಷಾ ಖಾನುಂ, ಕ.ಕಾ.ನಿ.ಪ ಸಂಘ ಬೆಂಗಳೂರು ಉಪಾಧ್ಯಕ್ಷರಾದ ಪುಂಡಲಿಕ ಬಾಳೋಜಿ, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಇನ್ನು 2023 -24 ನೇ ಸಾಲಿನ ವಾರ್ಷಿಕ ಪ್ರಶಸ್ತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಲೋಚನೇಶ ಹೂಗಾರ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗಣಪತಿ ಗಂಗೊಳ್ಳಿ, ಉಪಾಧ್ಯಕ್ಷರಾದ ಬಸವರಾಜ್ ವಿಜಾಪುರ, ತನುಜಾ ನಾಯಕ್, ವಿಜಯ ಹೂಗಾರ, ಪ್ರಧಾನ ಕಾರ್ಯದರ್ಶಿ ಸುಶೀಲೇಂದ್ರಾಚಾರ್ಯ ಕುಂದರಗಿ ಸೇರಿದಂತೆ ಹಿರಿಯ ಪತ್ರಕರ್ತರು, ಯುವ ಪತ್ರಕರ್ತರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest Posts

Don't Miss