Hubballi News: ಹುಬ್ಬಳ್ಳಿ: ನಮ್ಮ ಸಂವಿಧಾನವು ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದೆ. ಇಂತಹ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲರೂ ಕಾಪಾಡಿಕೊಳ್ಳಬೇಕು. ಸುಳ್ಳು ಮತ್ತು ತಿರುಚಿದ ಸುದ್ದಿಗಳಿಂದ ಅಪಚಾರ ಎಸಗಬಾರದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು.
ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.ಸುದ್ದಿ ವಾಹಿನಿಗಳಲ್ಲಿ ಸಿನಿಮಾ, ರಾಜಕಾರಣ, ಅಪರಾಧ ಸುದ್ದಿಗಳೇ ಆವರಿಸಿಕೊಂಡು ಜನರ ನಿಜವಾದ ಸಮಸ್ಯೆಗಳು ಹಿನ್ನೆಲೆಗೆ ಸರಿಯುವಂತಾಗಿವೆ. ಟಿಆರ್ಪಿ ದಾಹದಿಂದಾಗಿ ಸತ್ಯಕ್ಕೆ ಅಪಚಾರ ಆಗಬಾರದು. ಪತ್ರಕರ್ತರು ಮತ್ತು ಮಾಧ್ಯಮಗಳು ಬಹಳ ಜವಾಬ್ದಾರಿ, ಮಾನವೀಯತೆಯಿಂದ ವತಿರ್ಸಬೇಕು ಎಂದು ಸಲಹೆ ನೀಡಿದರು.ಪತ್ರಕರ್ತರ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಆತ್ಮಾವಲೋಕನದ ಅವಶ್ಯಕತೆ ಕಂಡು ಬರುತ್ತಿದೆ. ಆಗಲೇ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಯಾವುದೇ ಕ್ಷೇತ್ರವು ಪ್ರಬಲವಾದಷ್ಟು ಅಲ್ಲಿ ಭ್ರಷ್ಟಾಚಾರವೂ ಹೆಚ್ಚುತ್ತದೆ. ಪ್ರಜಾಪ್ರಭುತ್ವ ಸರಿಯಾದ ಮಾರ್ಗದಲ್ಲಿ ನಡೆಯಬೇಕಾದರೆ ಪತ್ರಿಕಾ ರಂಗದಿಂದ ಮಾತ್ರ ಸಾಧ್ಯವಿದೆ. ಇಂತಹ ಬದಲಾವಣೆಗೆ ಪತ್ರಕರ್ತರು ಅಣಿಯಾಗಬೇಕು ಎಂದರು.
Rules : ಮಣಿಪಾಲದಲ್ಲಿ ವಾರಾಂತ್ಯ ಪಬ್, ಕ್ಲಬ್ ಗಳಿಗೆ ಕಟ್ಟುನಿಟ್ಟಿನ ಕ್ರಮ ಜಾರಿ
ಹುಬ್ಬಳ್ಳಿ ಸೈಬರ್ ಕ್ರೈಮ್ ಪ್ರಕರಣ: ಮೂವರು ವಿದ್ಯಾರ್ಥಿಗಳು ಅರೆಸ್ಟ್..