Sunday, March 3, 2024

Latest Posts

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ

- Advertisement -

Movie News: ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.

ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ.

ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ವಿಭಾಗದಲ್ಲಿ “ಕಾಂತಾರ” ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಮತ್ತು 15 ಲಕ್ಷ ರೂ. ನಗದನ್ನು ಒಳಗೊಂಡಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ರಿಷಭ್‍ ಶೆಟ್ಟಿ, ‘ಕಳೆದ ವರ್ಷ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದೆವು. ಈ ಬಾರಿ ನಮ್ಮ ಚಿತ್ರ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಸ್ಪರ್ಧಿಸಿ, ತೀರ್ಪುಗಾರರ ವಿಶೇಷ ಪ್ರಶಸ್ತಿಯನ್ನು ಗೆದ್ದಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ’ ಎಂದು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

‘ಕಾಂತಾರ’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ಅಭೂತಪೂರ್ವ ಯಶಸ್ಸು ಪಡೆಯುವುದರ ಜೊತೆಗೆ, ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿ ಹಲವು ಭಾಷೆಗಳಿಗೆ ಡಬ್‍ ಆಗಿತ್ತು. ರಿಷಭ್‍ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್‍ ಕುಮಾರ್, ಕಿಶೋರ್ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಅವರ ಸಂಗೀತ ಮತ್ತು ಅರವಿಂದ್‍ ಕಶ್ಯಪ್‍ ಛಾಯಾಗ್ರಹಣವಿದೆ.

ಕಾಂತಾರ ಚಾಪ್ಟರ್ 1 ಟೀಸರ್ ರಿಲೀಸ್: ಅರ್ಧ ಗಂಟೆಯಲ್ಲಿ 4 ಲಕ್ಷ ವೀವ್ಸ್

ಹಿರಿಯ ನಟಿ ಲೀಲಾವತಿ ನಿರ್ಮಾಣದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ನಟಿ ಲೀಲಾವತಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ: ಡಿ.ಕೆ ಶಿವಕುಮಾರ್

- Advertisement -

Latest Posts

Don't Miss