- Advertisement -
National news
ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುವೀರ್ ಒಡೆಯರ್ ಮೊದಲಾದವರು ಭಾಗಿಯಾದ್ದರು. ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಹೆಚ್ಚು ಹೊರನಾಡು ಕನ್ನಡಿಗರ ಭಾಗಿಯಾದದ್ದು, ವಿಶೇಷವಾಗಿತ್ತು.
ಬೆಂಗಳೂರು ವಿವಿ ಆವರಣದಲ್ಲಿ ಬೆಂಕಿ..! ಆಕಸ್ಮಿಕ ಅವಘಡಕ್ಕೆ ಕಾರಣ ನಿಗೂಢ..!
- Advertisement -