Wednesday, July 2, 2025

Latest Posts

ಕೃಷಿ ಕಾಯ್ದೆಗಳ ರದ್ದು ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ

- Advertisement -

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆ ಮಾಡಿದ್ದಾರೆ. ರೈತರು ತಮ್ಮ ಪ್ರತಿಭಟನೆಯನ್ನು ವಾಪಾಸು ಪಡೆದು ತಮ್ಮ ಹೊಲಗಳಿಗೆ ಹಿಂತಿರುಗಿ ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಈ ವೇಳೆ ಮನವಿ ಮಾಡಿದ್ದಾರೆ. ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸರ್ಕಾರ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.  ‘ನಿಜವಾದ ಮತ್ತು ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ’ ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ನಾವು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸುತ್ತೇವೆ” ಎಂದು ಹೇಳಿದ್ದಾರೆ.

- Advertisement -

Latest Posts

Don't Miss