Sunday, May 11, 2025

Latest Posts

‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’

- Advertisement -

Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ  ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ.

ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಈ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.

- Advertisement -

Latest Posts

Don't Miss