Sunday, April 20, 2025

Latest Posts

ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ

- Advertisement -

Hassan News: ಹಾಸನ : ಹಾಸನ ಮೈತ್ರಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಆಂತರಿಕ ಕಲಹ ಬೀದಿಗೆ ಬಂದಿದೆ.

ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಖಾಡಕ್ಕಿಳಿದು, ಪ್ರಚಾರ ಆರಂಭಿಸಿದ್ದಾರೆ.

ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಎಚ್.ಪಿ.ಕಿರಣ್ ಕುಮಾರ್, ನಾಮಪತ್ರ ಅರ್ಜಿಗೆ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸಿದ್ದಾರೆ. ಕಿರಣ್ ಕುಮಾರ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರೀತಂಗೌಡರ ಅತ್ಯಾಪ್ತರಾಗಿದ್ದು, ಇಂದು ತಮ್ಮ ಬೆಂಬಲಿಗರ ಜೊತೆ ಹಾಸನದ ಸಿದ್ದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗೆ ಕಾರಣವೇನು ಎಂದರೆ, ಜಿಲ್ಲೆಯ ಪ್ರಭಾವಿ ನಾಯಕ ಪ್ರೀತಂಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಪ್ರಜ್ವಲ್ ರೇವಣ್ಣ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹಾಾಗಾಗಿ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ನಾಯಕರು, ಮೈತ್ರಿ ಅಭ್ಯರ್ಥಿ ಘೋಷಣೆಯಾಗದ ಹಿನ್ನೆಲೆ ಪ್ರಚಾಾರ ಕಾರ್ಯ ಆರಂಭಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ನಡೆ, ಜೆಡಿಎಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ನಾನು ಬದುಕಿರುವವರೆಗೆ ಕನ್ನಡಿಗನೇ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ: ಸಿಎಂ ಸಿದ್ದರಾಮಯ್ಯ

ಭೂತಾನ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ.. ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವ

ಮೊಣಕಾಲಿನಲ್ಲಿ ನಡೆದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಜಾನ್ವಿ ಕಪೂರ್

- Advertisement -

Latest Posts

Don't Miss