Saturday, July 27, 2024

Latest Posts

ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದ ಪ್ರೀತಂಗೌಡ, ಆದರೆ..

- Advertisement -

Hassan News: ಹಾಸನ : ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಮಾಜಿ ಶಾಸಕ ಪ್ರೀತಂಗೌಡ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಂಗೌಡ, ಹಾಾಸನದ ವಿದ್ಯಾನಗರದಿಂದ ಪ್‌ರಚಾರ ಕಾರ್ಯ ಆರಂಭಿಸಿದ್ದಾರೆ. ಕರಪತ್ರಗಳನ್ನು ಹಂಚುವ ಮೂಲಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಹೈಕಮಾಂಡ್ ಸೂಚನೆಗೆ ಮಣಿದ ಪ್ರೀತಂಗೌಡ, ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ಆರಂಭಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಪ್ರೀತಂಗೌಡ, ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ಆಗಬೇಕು ಎಂದು ಪ್ರಚಾರ ಆರಂಭಿಸಿದ್ದೇನೆ. ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಗೆಲ್ಲುವ ಮೂಲಕ ಇಡೀ ದೇಶದಲ್ಲಿ 400 ಕ್ಕೂ ಹೆಚ್ಚು ಸೀಟ್‌ಗಳನ್ನು ಗೆಲ್ಲಬೇಕು. ಹಿರಿಯರು ನಮಗೆ ಒಂದು ಜವಾಬ್ದಾರಿ ಕೊಟ್ಟಿದ್ದಾರೆ. ನಮ್ಮ ಬೂತ್ ನಂಬರ್ 89 ರಿಂದ ಪ್ರಚಾರ ಆರಂಭಿಸಿದ್ದೇವೆ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು. 2021 ಬೂತ್ ಹಾಸನ ಲೋಕಸಭಾ ಕ್ಷೇತ್ರಕ್ಕೆ ಬರುತ್ತೆ. ನಾಳೆ ಸಿಮೆಂಟ್ ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಲೂರಿನಲ್ಲಿ ಪ್ರಚಾರ ಮಾಡಲು ಸೂಚನೆ ಕೊಟ್ಟಿದ್ದೇನೆ. ನಾವು ಚಾಲೆಂಗ್ ಆಗಿ ತೆಗೆದುಕೊಂಡಿದ್ದೇನೆ. ಎನ್‌ಡಿಎ ಕೂಟ ಗೆಲ್ಲಿಸುವುದೇ ನಮ್ಮ ಗುರಿ ಎಂದಿದ್ದಾರೆ.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕಿಂತ ಒಂದು ಮತವನ್ನು ಹೆಚ್ಚಿಗೆ ಕೊಡಿಸಲು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ. ಹೊಳೆನರಸೀಪುರ ಕಾಂಗ್ರೆಸ್ ಅಭ್ಯರ್ಥಿಗಿಂತ ಎನ್‌ಡಿಎ ಅಭ್ಯರ್ಥಿ ಎಷ್ಟು ಲೀಡ್ ತಗೊತರೊ ಅದಕ್ಕಿಂತ ಒಂದು ಮತ ಹೆಚ್ಚಿಗೆ ಕೊಡಿಸುವುದು ನನ್ನ ಗುರಿ. ಯಾರೇ ಆದರೂ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಹೆಸರಿನಲ್ಲೇ ಓಟು ಕೇಳಬೇಕು. ಕರ್ನಾಟಕದಿಂದ ಕಾಶ್ಮೀರದವರೆಗೂ ಮೋದಿ ಅವರ ಹೆಸರಿನಲ್ಲಿ ಮತ ಕೇಳಬೇಕು ಎಂದು ಹೇಳಿದ ಪ್ರೀತಂ, ಪ್ರಚಾರದಲ್ಲಿ ಎಲ್ಲಿಯೂ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಡೈರೆಕ್ಟ್ ಆಗಿ ಹೇಳಲಿಲ್ಲ.

ಅವರು ಆರು ಬಾರಿ ಶಾಸಕರು, ಅವರ ತಂದೆ ಪ್ರಧಾನಮಂತ್ರಿ ಆಗಿದ್ದವರು. ಎನ್‌ಡಿಎ ಅಭ್ಯರ್ಥಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಮತ ತೆಗೆದುಕೊಳ್ಳುತ್ತಾರೆ ಅದಕ್ಕಿಂತ ಒಂದು ಮತ ಹೆಚ್ಚಿಗೆ ಕೊಡಿಸುತ್ತೇನೆ. ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ. ನಾನು ಸೋತಿರುವವನು, ನನ್ನ ಬಳಿ ಶ್ರಮ ಇದೆ. ಅವರ ಶಾಸಕರು ಇದ್ದಾರೆ ಶಕ್ತಿ ಅವರ ಬಳಿ ಇದೆ ಎಂದು ಪ್ರೀತಂಗೌಡ ಹೇಳಿದ್ದಾರೆ. ಆದರೆ ಈ ವೇಳೆ ಪ್ರೀತಂ ಜೆಡಿಎಸ್ ಪಕ್ಷದ ಹೆಸರು, ಚಿಹ್ನೆಯ ಹೆಸರು ಅಥವಾ ಪ್ರಜ್ವಲ್ ರೇವಣ್ಣರ ಹೆಸರನ್ನು ಎಲ್ಲಿಯೂ ಪ್ರಸ್ತಾಪಿಸಿಲ್ಲ.

ನಾನು ಪ್ರೀತಿ ತೋರಿಸಿದರೆ ಕೆಲಸ ಮಾಡುವವನು. ಕಂಪ್ಲೆಂಟ್ ಮಾಡಿದರೆ ನನಗೆ ರಾಜಕೀಯ ಬೇಡ ಅಂತ ಮನೆಯಲ್ಲಿ ಕೂರ್ತಿನಿ. ನನಗೆ ಯಾವ ರಾಜ್ಯ ನಾಯಕರು ಸೂಚನೆ ಕೊಟ್ಟಿಲ್ಲ. ಯಾವ ರಾಜ್ಯ ನಾಯಕರನ್ನಾದರೂ ಕೇಳಿ. ಬಾವಿ ಕಪ್ಪೆಯಾಗಿ ಇರುವುದು ಬೇಡ ಅಂತ ಎರಡು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ ಕೊಟ್ಟಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ನನಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಿದ್ದಾರೆ. ಒಬ್ಬ ಸರ್ಕಾರಿ ನೌಕರರ ಮಗನನ್ನು ರಾಜ್ಯಮಟ್ಟದಲ್ಲಿ ಬೆಳೆಸುವುದೇ ಬಿಜೆಪಿ ಪಕ್ಷ. ಬೂತ್ ಗೆದ್ದರೆ ದೇಶ ಗೆಲ್ಲಬಹುದು ಎಂಬು ಕಲ್ಪನೆ ನಮ್ಮದು. ನಾನು ಯಾರ ಒತ್ತಡಕ್ಕೂ ಮಣಿಯಲ್ಲ ಎಂದು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಪ್ರೀತಂಗೌಡ ಹೇಳಿದ್ದಾರೆ.

ಮೇಲೆ ತೀರ್ಮಾನ ಆದ ಮೇಲೆ ಕೆಲಸ ಮಾಡಬೇಕು. ಯಾರು ಯಾರನ್ನ ಸಂಪರ್ಕ ಮಾಡುವುದು ಇರಲ್ಲ. ನಮ್ಮ ರಾಜ್ಯಾಧ್ಯಕ್ಷರ ಏನು ಸೂಚನೆ ಕೊಡ್ತಾರೆ ಆ ಕೆಲಸ ಮಾಡ್ತಿನಿ. ಈಗಾಗಲೇ ಬೂತ್ ಮಟ್ಟದ ಪದಾಧಿಕಾರಿಗಳು, ತಾಲ್ಲೂಕು, ಜಿಲ್ಲಾಮಟ್ಟದ ಪದಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ನನ್ನ ವಿರೋಧಿಗಳು ಯಾರು ಅನ್ನೋದು ಇಡೀ ರಾಜ್ಯಕ್ಕೆ ಗೊತ್ತಿದೆ. ಅವಾಗವಾಗ ನಾನು ಹಾಸನಕ್ಕೆ ಬರ್ತಿರ್ತಿನಿ. ನರೇಂದ್ರಮೋದಿ ಅವರು ಹಾಸನಕ್ಕೆ ಪ್ರಚಾರಕ್ಕೆ ಬರುವುದು ನನಗೆ ಗೊತ್ತಿಲ್ಲ ಎಂದ‌ು ಪ್ರೀತಂಗೌಡ ಹೇಳಿದ್ದಾರೆ.

ಗೃಹಲಕ್ಷ್ಮೀ ಹಣದಿಂದ ಫ್ರಿಜ್ ಖರೀದಿಸಿದ ಮಹಿಳೆ: ಸಾರ್ಥಕತೆಯ ಭಾವ ಎಂದ ಡಿಸಿಎಂ ಡಿಕೆಶಿ

ಬೆಳಗಾವಿಯಲ್ಲಿ ಮನೆ ಖರೀದಿಸಿದ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್..

ಚಪ್ಪಲಿ ಹಾರ ಹಾಕಿಕೊಂಡು ಮತ ಕೇಳಲು ಬಂದ ಪಕ್ಷೇತರ ಅಭ್ಯರ್ಥಿ..

- Advertisement -

Latest Posts

Don't Miss