ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 9ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ, ದಾವಣಗೆರೆ ಜಿಲ್ಲೆಯ ಜಗಳೂರು ಬಳಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಈ ಪರಿಣಾಮವಾಗಿ 9ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಜಗಳೂರು, ದಾವಣಗೆರೆ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇನ್ನೂ ಈ ಬಸ್ ಬೆಂಗಳೂರು ಕಡೆಯಿಂದ ಸಿಂದಗಿ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಗಾಯಾಳುವಿನ ಓರ್ಪ ಪ್ರಯಾಣಿಕನ ಕೈ ಕಟ್ ಆಗಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




