ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ ಮುಂದಾಗಿವೆ. ಇಂದಿನಿಂದ 2 ದಿನಗಳ ಕಾಲ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಧ್ಯಾಹ್ನ ನವದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣ ಬೆಳೆಸಲಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಿ ಬಳಿಕ ಕೇಂದ್ರದ ವಿವಿಧ ಸಚಿವರನ್ನು ಭೇಟಿ ಮಾಡಲಿದ್ದಾರೆ.
ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು : ಸಿಎಂ ಬೊಮ್ಮಾಯಿ
ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡ ಏರ್ಪೋರ್ಟ್ಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದು ಮಧ್ಯಾಹ್ನ 1.30ಕ್ಕೆ ಸಮಾವೇಶದ ವೇದಿಕೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.30ರವರೆಗೂ ಸಮಾವೇಶದಲ್ಲಿ ಇರಲಿದ್ದಾರೆ. ವೇದಿಕೆ ಮೇಲೆ ಕೇವಲ ಮಹಿಳಾ ನಾಯಕಿಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಕಾಂಗ್ರೆಸ್ನ ‘ನಾ ನಾಯಕಿ’ ಸಮಾವೇಶದಲ್ಲಿ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗೂ ಕಾಂಗ್ರೆಸ್ ಈ ಸಮಾವೇಶದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದೆ.
ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ
ಮಠ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು : ಸಿಎಂ ಬೊಮ್ಮಾಯಿ