ಉತ್ತರ ಪ್ರದೇಶ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಸೋನಭದ್ರಾದಲ್ಲಿ ನಿನ್ನೆ ಜಮೀನು ವ್ಯಜ್ಯ ಕುರಿತಂತೆ ನಡೆದ ಮಾರಣಹೋಮದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುವಾಗ ತಡೆದ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪ್ರಿಯಾಂಕ ಗಾಂಧಿ ಭಾಗಿಯಾಗಿದ್ರು. ಬಳಿಕ ಸೋನಭದ್ರಾದಲ್ಲಿ ಜಮೀನು ವಿವಾದ ವಿಚಾರವಾಗಿ ಜು 17ರಂದು ಕೊಲೆಗೀಡಾಗಿದ್ದ 10 ಮಂದಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಪ್ರಿಯಾಂಕ ಗಾಂಧಿ ತೆರಳುತ್ತಿದ್ದರು. ಈ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿಲು ಯತ್ನಿಸಿದ್ದ ಆರೋಪದ ಮೇಲೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ವಾಕ್ಸಮರ ನಡೆಸಿದ ಪ್ರಿಯಾಂಕಾ ಗಾಂಧಿ ನನ್ನೊಂದಿಗೆ ಕೇವಲ 4 ಮಂದಿಯನ್ನು ಕರೆದೊಯ್ಯುವೆ, ಅಲ್ಲಿಗೆ ತೆರಳಲು ಅವಕಾಶ ನೀಡಿ ಅಂತ ಪೊಲೀಸರಲ್ಲಿ ಕೇಳಿಕೊಡರು. ಇದಕ್ಕೆ ಆವಕಾಶಕೊಡದ ಪೊಲೀಸರು ವಶಕ್ಕೆ ಪಡೆದ್ರು.
ಇನ್ನು ಘಟನೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಅಕ್ರವಾಗಿ ಬಂಧಿಸಿದ್ದಾರೆ. ಪ್ರಾಣ ಕಳೆದುಕೊಂಡ 10 ಮಂದಿ ಆದಿವಾಸಿಗಳ ಕುಟಂಬಸ್ಥರನ್ನು ಭೇಟಿ ಮಾಡಲು ಅವಕಾಶ ನಿರಾಕರಿಸಲಾಗಿದೆ. ಇದು ಉತ್ತರಪ್ರದೇಶದಲ್ಲಿ ಬಿಜೆಪಿ ಸೃಷ್ಟಿ ಮಾಡಿರೋ ಅಭದ್ರತೆಯನ್ನು ತೋರ್ಪಡುತ್ತದೆ ಅಂತ ಟ್ವೀಟ್ ಮಾಡೋ ಮೂಲಕ ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.