Sunday, May 19, 2024

Latest Posts

ನೇಹಾ ಕೊ*ಲೆ ಖಂಡಿಸಿ ಧಾರವಾಡದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದ ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆಯೇ ಗೂಡ್ಸ್ ವಾಹನ ಚಾಲಕನೋರ್ವ ತನ್ನ ವಾಹನವನ್ನು ದಾಟಿಸಲು ಮುಂದಾದ ಆಗ ಪ್ರತಿಭಟನಾಕಾರರೊಬ್ಬರು ಆ ವಾಹನಕ್ಕೆ ಒದ್ದು ಅಲ್ಲೇ ನಿಲ್ಲಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು.

ಕೋರ್ಟ್ ವೃತ್ತದಲ್ಲೇ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ ಅಂಬ್ಯುಲೆನ್ಸ್‌ ಕೂಡ ಬಂತು. ಈ ವೇಳೆ ಪ್ರತಿಭಟನಾಕಾರರು ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟು ನೇಹಾಳನ್ನು ಕೊಂದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದರು.

ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹ*ತ್ಯೆ ಪ್ರಕರಣ : ಶಿಕ್ಷಕರ ಪುತ್ರ ಫಯಾಜ್ ಅರೆಸ್ಟ್‌

ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು..?

- Advertisement -

Latest Posts

Don't Miss