ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ವಿಡಿಯೋ ಬಿರುಗಾಳಿ ಎಬ್ಬಿಸಿದೆ. ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ, ಘಟನೆಯ ವಿಡಿಯೋ ಇದಾಗಿದೆ.

ಸೆಪ್ಟೆಂಬರ್‌ 8ರಂದು ರಾತ್ರಿ 8 ಗಂಟೆ ಸುಮಾರಿಗೆ, ಈದ್ ಮಿಲಾದ್ ಮೆರವಣಿಗೆ ನಡೆದಿದೆ. ಗಾಂಧಿ ವೃತ್ತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವಾಗ, ಕೆಲ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. 12 ಸೆಕೆಂಡ್​ ಇರುವ ವಿಡಿಯೋ ವೈರಲ್‌ ಆಗ್ತಿದ್ದಂತೆ, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಪಾಕ್ ಪರ ಘೋಷಣೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ದೂರು ದಾಖಲಿಸಿದ್ದಾರೆ.

ಈ ಮಧ್ಯೆ, ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ, ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಅವರ ಹೇಳಿಕೆ ಭಾರೀ ವಿವಾದಕ್ಕೀಡಾಗಿದೆ. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ನಾನು 4 ಬಾರಿ ಶಾಸಕನಾಗಿ, ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ ಅಂದ್ರೆ, ಅದಕ್ಕೆ ಕಾರಣ ಮುಸ್ಲಿಂ ಬಾಂಧವರು. ಮುಂದಿನ ದಿನಗಳಲ್ಲಿ ನನ್ನ ಮಗ ಗಣೇಶ್‌ ಮೇಲೆ ನಿಮ್ಮ ಆಶೀರ್ವಾದ ಇರಲಿ. ನಿಮ್ಮ ಮನೆಯ ಮಗನಾಗಿ ಕೊನೆಯವರೆಗೂ ಇರುತ್ತೇನೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ, ಮುಸ್ಲಿಂ ಆಗಿ ಹುಟ್ಟಬೇಕೆಂದು ಬಯಸ್ತೀನಿ. ಹೀಗಂತ ಶಾಸಕ ಸಂಗಮೇಶ್‌ ಹೇಳಿದ್ದು, ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

About The Author