Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಘೋಷಣೆ ಕೂಗಿದವನನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ವರಿಕೆ ನೀಡಿ, ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ಮಾಡಿದ್ದು, ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ರಾಜ್ಯ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಉಗ್ರ ಸಿದ್ದರಾಮಯ್ಯ, ಸಿದ್ರಾಮುಲ್ಲಾಖಾನ್ ಎಂದು ಘೋಷಣೆ ಕೂಗಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆಸಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಕರೆದೊಯ್ದಿದ್ದಾರೆ.
ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ
ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ
ಪಾಕ್ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

