Hassan News: ಹಾಸನದಲ್ಲಿ ಅಪಘಾತಗೊಂಡು ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಬಿಹಾರದವರಾಗಿದ್ದ ಹರ್ಷವರ್ಧನ್ ಎಂಬ 26 ವರ್ಷದ ಅಧಿಕಾರಿ, ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ, ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ.
2022ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಹರ್ಷವರ್ಧನ್ 153ನೇ ರ್ಯಾಂಕ್ ಪಡೆದಿದ್ದರು. ಹಾಸನ ಜಿಲ್ಲೆಗೆ ಡಿವೈಎಸ್‌ಪಿಯಾಗಿ ಹರ್ಷವರ್ಧನ್ ನಿಯೋಜನೆಗೊಂಡಿದ್ದರು. ಅವರು ಮೈಸೂರಿನಲ್ಲಿದ್ದು ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದು, ತರಬೇತಿ ಮುಗಿಸಿ, ಮೈಸೂರಿನಿಂದ ಹಾಸನದತ್ತ ಬರುವಾಗ, ಜೀಪ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ, ಹರ್ಷವರ್ಧನ ಸಾವನ್ನಪ್ಪಿದ್ದಾರೆ.
ಜೀಪ್ ರಸ್ತೆಗೆ ಬಿದ್ದು, ತೆಂಗಿನ ಮರಕ್ಕೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆ ಫಲಿಸದೇ, ಹರ್ಷವರ್ಧನ ನಿಧನರಾಗಿದ್ದಾರೆ.
ಇನ್ನು ಹರ್ಷವರ್ಧನ್ ಸಾವಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.
ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.
ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ… pic.twitter.com/VwU86Irabi
— Siddaramaiah (@siddaramaiah) December 2, 2024