ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ರಾಜೀನಾಮೆ

ಬೆಂಗಳೂರು: ಇಂದು ಬೆಳಿಗ್ಗೆ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ತಿರುಚಿ ಬರೆದಂತ ರೋಹಿತ್ ಚಕ್ರತೀರ್ಥ ಅವರ ವಿರುದ್ಧ, ರಾಜ್ಯ ಸರ್ಕಾರ ಮೌನ ಧೋರಣೆ ವಿರೋಧಿಸಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪನಾ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಇದೀಗ ರಾಷ್ಟ್ರಕವಿ ಡಾ.ಜಿಎಸ್ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಈ ಸಂಬಂಧ ರಾಜೀನಾಮೆ ಪತ್ರ ಬರೆದಿದ್ದು, ಆ ಪತ್ರದಲ್ಲಿ ಸದ್ಯದ ಬೆಳವಣಿಗೆಯಿಂದ ಆತಂಕ, ಭಯ ಉಂಟಾಗುತ್ತಿದೆ. ರಾಜ್ಯದಲ್ಲಿ ಕೋಮುಭಾವನೆ ಕದಡುವ ಕೆಲಸವಾಗುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರೋದು ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ, ರಾಷ್ಟ್ರಕವಿ ಡಾ.ಜಿಎಸ್ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಘೋಷಿಸಿದ್ದಾರೆ.

ಇನ್ನೂ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್ ಜಿ ಸಿದ್ಧರಾಮಯ್ಯ ರಾಜೀನಾಮೆ ಘೋಷಣೆ ಮಾಡಿದ್ದರೇ, ಅವರೊಂದಿಗೆ ಸದಸ್ಯ ಸ್ಥಾನಕ್ಕೆ ಡಾ.ಎಚ್ ಎಸ್ ರಾಘವೇಂದ್ರ ರಾವ್, ಡಾ.ಚಂದ್ರಶೇಖರ ನಂಗಲಿ ಮತ್ತು ಡಾ.ನಟರಾಜ ಬೂದಾಳು ಕೂಡ ರಾಜೀನಾಮೆ ನೀಡಿದ್ದಾರೆ.

About The Author