ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ
ತಾಲ್ಲೂಕು ಅಭಿವೃದ್ಧಿಗೆ ಕ್ಷೇತ್ರದ ಶಾಸಕನಾಗಿ ನಾನು ಬದ್ಧನಾಗಿರುತ್ತೇನೆ. ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂದು ಟೀಕೆ ಮಾಡುತ್ತಿದ್ದಾರೆ. ರಸ್ತೆ ಅಭಿವೃದ್ಧಿಗೆ 15ಕೋಟಿ ಅನುದಾನ ಬಿಡುಗಡೆಯಾಗಿದೆ. ಸಧ್ಯದಲ್ಲಿಯೇ ಅಭಿವೃದ್ದಿ ಕಾಮಗಾರಿ ಆರಂಭಿಸಲಾಗುವುದು. ನಾನು ಮಂಜೂರು ಮಾಡಿಸಿ ತಂದಿರುವ ಕಾಮಗಾರಿಗಳೇ ಉತ್ತರ ನೀಡುತ್ತವೆ.
ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ
ಸಣ್ಣ ನೀರಾವರಿ ಯೋಜನೆಯಲ್ಲಿ ಕೆರೆ ಕಟ್ಟೆಗಳ ಅಭಿವೃದ್ಧಿಗೆ 500ಕೋಟಿ ಅನುದಾನ ಬಿಡುಗಡೆ, 35 ಶಾಲಾ ಕಟ್ಟಡಗಳ ನಿರ್ಮಾಣಕ್ಕೆ 10 ಕೋಟಿ,, ಭಾರಿ ಮಳೆಯಿಂದಾಗಿ ಹಾನಿಯಾದ ಕೆರೆ ಕಟ್ಟೆ ದುರಸ್ತಿಗೆ 50 ಕೋಟಿ ಬಿಡುಗಡೆಯಾಗಿದೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಬದ್ದನಾಗಿರುತ್ತೇನೆ ಎಂದ ಸಚಿವ ಕೆ.ಸಿ.ನಾರಾಯಣ್ ಗೌಡ. ಸಭೆಯಲ್ಲಿ ಡಿಸಿ ಎಚ್.ಎನ್. ಗೋಪಾಲಕೃಷ್ಣ, ಎಸಿ ನೊಂಜಾಯ ಮಹಮದ್ ಅಕ್ರಂ, ತಹಶೀಲ್ದಾರ್ ಎಂ.ವಿ.ರೂಪ, ಸೇರಿ ಹಲವರು ಉಪಸ್ಥಿತರಿದ್ದರು.
ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

