- Advertisement -
www.karnatakatv.net :ಹುಬ್ಬಳ್ಳಿ: ದೇಶದ ರಾಜಧಾನಿ ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪೊಲೀಸ್ ಕಾನ್ ಸ್ಟೇಬಲ್ ಸಾಬಿಯಾ ಸೈಫಿ ಮಹಿಳೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರ ಬಿಡನಾಳದ ನಾಗರಿಕರು ಮೆಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.
ಸಾಬಿಯಾ ಸೈಪಿಯ ಮೇಲೆ ನಡೆದ ಅತ್ಯಾಚಾರ ಹಲ್ಲೆ ಪ್ರಕರಣ ಖಂಡಿಸಿ ಹೆಣ್ಣು ಮಗಳ ಕುಟುಂಬಕ್ಕೆ ನ್ಯಾಯ ಸಿಗಬೇಕು, ಕೃತ್ಯಗೈದವರಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಟಿವಿ- ಹುಬ್ಬಳ್ಳಿ
- Advertisement -