Saturday, July 5, 2025

Latest Posts

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

- Advertisement -

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ ಘೋಷಣೆ ಕೂಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಇನ್ನೂ ನಾವು ಕೂಡ ಸಾರ್ವಜನಿಕ ಸೇವೆಯಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದೇವೆ ಇಂತಹ ಸಂದರ್ಭಗಳಲ್ಲಿ ನಮ್ಮ ಮೇಲೆ  ಹಲ್ಲೆ ಮಾಡುವುದು ಎಷ್ಟರಮಟ್ಟಿಗೆ ಸರಿ ನಮ್ಮ ಜೀವಕ್ಕೂ ಬೆಲೆ ಕೊಡಿ ಎಂದು ಪ್ರತಿಭಟನಾನಿರತ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಟಿವಿ- ಹುಬ್ಬಳ್ಳಿ

- Advertisement -

Latest Posts

Don't Miss