- Advertisement -
ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ.
ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ರು. ಅಲ್ಲದೆ ಕೂಡಲೆ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು ಅಂತ ಕೇಂದ್ರಕ್ಕೆ ಒತ್ತಾಯಿಸಿದ್ರು.
ಈ ಮಧ್ಯೆ, ರಾಯಚೂರಿನಲ್ಲಿ ಸಾರಿಗೆ, ಆಟೋ ಸಂಚಾರ ಎಂದಿನಂತಿವೆ. ಅಲ್ಲದೆ ಅಂಗಡಿ ಮುಂಗಟ್ಟುಗಳು ಕೂಡ ತೆರೆದಿವೆ, ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅನಿಲ್ ಕುಮಾರ್, ಕರ್ನಾಟಕ ಟಿವಿ ರಾಯಚೂರು
- Advertisement -