‘ಕೈ’ ಮುಖಂಡ ಗೋಪಾಲಕೃಷ್ಣ ವಿರುದ್ಧ ಯಲಹಂಕ ಮಾಧ್ಯಮ ಕೇಂದ್ರದ ಪದಾಧಿಕಾರಿಗಳ ಆಕ್ರೋಶ..!

ಯಲಹಂಕ: ತಮ್ಮ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸುವಂತೆ ಪತ್ರಕರ್ತರು ಒತ್ತಾಯಿಸಿದ ಘಟನೆ ಯಲಹಂಕದಲ್ಲಿ ನಡೆಯಿತು.

ಹೌದು, ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಯಲಹಂಕದ ಮಿನಿ ವಿಧಾನಸೌಧದ ಮುಂಭಾಗ ಜನಧ್ವನಿ ಕಾರ್ಯಕ್ರಮದ ಹೆಸರಲ್ಲಿ ಪ್ರತಿಭಟನೆ ನಡೆಸಿದ್ರು, ಈ ವೇಳೆ ಸಾರ್ವಜನಿಕವಾಗಿ ಮಾತನಾಡುವ ವೇಳೆ ಸ್ಥಳೀಯ ಶಾಸಕರು ‘ಮಾಧ್ಯಮದವರನೆಲ್ಲಾ ಕೊಂಡುಕೊಂಡಿದ್ದಾರೆ’ ಎಂಬ ಹೇಳಿಕೆ ನೀಡಿದ್ದು, ಇದೀಗ ಭಾರೀ ವಿರೋಧ ವ್ಯಕ್ತವಾಗಿದೆ.

ಗೋಪಾಲಕೃಷ್ಣ ಅವರು ನೀಡಿರುವ ಹೇಳಿಕೆ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ಬಿಡುಗಡೆ ಮಾಡಿ, ಇಲ್ಲದೇ ಹೋದಲ್ಲಿ ಬೇಷರತ್ ಕ್ಷಮೆಯಾಚಿಸಲು ಸೂಚಿಸುವಂತೆ ಕೆಪಿಸಿಸಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಗೆ ಪತ್ರಬರೆದು ಒತ್ತಾಯಿಸಲಾಯಿತು.

ಅಲ್ಲದೇ ಬೇಷರತ್ ಕ್ಷಮೆಯಾಚಿದೇ ಹೋದಲ್ಲಿ, ಯಲಹಂಕ ಭಾಗದ ಎಲ್ಲಾ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಬಹಿಷ್ಕರಿಸಿ, ಹೋರಾಟ ಮಾಡೋದಾಗಿ ಎಚ್ಚರಿಸಿದರು.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author