Friday, April 18, 2025

Latest Posts

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಖಂಡಿಸಿ ಪ್ರತಿಭಟನೆ..!

- Advertisement -

www.karnatakatv.net :ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ  ಹಿಂದಿ ಹೇರಿಕೆ  ಮಾಡುತ್ತಿರುವುದನ್ನು  ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಕರವೇ ಅಧ್ಯಕ್ಷ ಸುರೇಶ್ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವ ಮೂಲಕ ಸರ್ಕಾರದ  ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸೆಪ್ಟೆಂಬರ್ 14 ನ್ನು ಕರ್ನಾಟಕದಲ್ಲಿ ಹಿಂದಿ ದಿನವೆಂದು  ಆಚರಣೆ ಮಾಡುತ್ತಿರುವುದು ಖಂಡನೀಯ. ಕೇಂದ್ರದ ಸರ್ಕಾರಿ ಸ್ವಾಮ್ಯದ ಬ್ಯಾಂಕ್, ರೈಲ್ವೆ ಮತ್ತು ಅಂಚೆ ಇಲಾಖೆಗಳಲ್ಲಿ ಇರುವ ಖಾಲಿ ಹುದ್ದೆಗಳ ಭರ್ತಿಗೆ ನಡೆಯುವ ಪರೀಕ್ಷೆಯನ್ನು  ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನಡೆಸಲಾಗುತ್ತಿದೆ ಇದರಿಂದ ಕರ್ನಾಟಕದ ಬ್ಯಾಂಕುಗಳಿಗೆ ಕನ್ನಡೇತರರು ಆಯ್ಕೆಯಾಗುತ್ತಿದ್ದಾರೆ ಇದು ಕನ್ನಡಿಗರಿಗೆ ಆಗುತ್ತಿರುವ ಅತಿ ದೊಡ್ಡ ಅನ್ಯಾಯವಾಗುತ್ತಿದೆ ಈ ಹಿನ್ನೆಲೆಯಲ್ಲಿ ಹಿಂದಿ ದಿವಸದ ಆಚರಣೆ ನಮಗೆ ಬೇಕಿಲ್ಲ ಎಂದು ಅಧ್ಯಕ್ಷ ಸುರೇಶ್ ನಾಯಕ್ ಆಗ್ರಹಿಸಿದರು.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗೆ ತಲುಪಿಸಲು ತಹಸೀಲ್ದಾರ್ ಎಂ.ರವಿಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಾಜೇಂದ್ರ , ಜಗದೀಶ್, ರಾಜೇಶ್, ಸುಭಾಷ್ ಮಾಡ್ರಹಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ

- Advertisement -

Latest Posts

Don't Miss