ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.

ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ ಹೆಚ್ಚಳ ಸೇರಿದಂತೆ ಅಗತ್ಯ ಸೌಲಭ್ಯಕ್ಕೆ ಆಗ್ರಹಿಸಿ ಧರಣಿ ನಡೆಸಿದ್ದು, ಜುಲೈ 10 ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ಮುಂದಾಗದ್ದಾರೆ.
ರಾಜ್ಯದಲ್ಲಿ ಒಟ್ಟು 42 ಸಾವಿರ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದು, ಕೊರೊನಾ ತಡೆಯಲು ಇವರು ಪಟ್ಟ ಹರಸಾಹಸ ಅಷ್ಟಿಷ್ಟಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿ, ಸೋಂಕು ಪತ್ತೆ ಹಚ್ಚುವಲ್ಲಿ ಇವರ ಪಾತ್ರ ಅತಿ ಮುಖ್ಯವಾಗಿದೆ.
ಎಲ್ಲರೂ ಕೊರೊನಾಗೆ ಭಯಭೀತರಾಗಿ ಮನೆಯಲ್ಲೇ ಅವಿತು ಕುಳಿತಿರುವಾಗ, ವೈದ್ಯರು, ನರ್ಸ್, ಪೊಲೀಸರ ಜೊತೆ ಆಶಾ ಕಾರ್ಯಕರ್ತೆಯರು ಕೂಡ ಮನೆ ಮನೆಗೆ ತೆರಳಿ ಕೊವಿಡ್- 10 ಚೆಕಪ್ ಮಾಡಿದ್ದರು. ಈ ವೇಳೆ ಅವರಿಗೆ ಕೆಲ ಕಡೆ ಅವಮಾನವೂ ಮಾಡಲಾಯಿತು. ಅಲ್ಲದೇ ಇವರ ಕೆಲಸ ಮೆಚ್ಚಿ ಕೆಲ ಕಡೆ ಸನ್ಮಾನವೂ ಮಾಡಲಾಗಿತ್ತು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.