Hubli News: ಹುಬ್ಬಳ್ಳಿ: ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಬಿವಿಪಿ ಕಾರ್ಯಕರ್ತರು ಬಿವಿಬಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ರಸ್ತೆ ಮಧ್ಯೆ ಬರಲು ಪ್ರಯತ್ನಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದು, ಎಬಿವಿಪಿ ಮುಖಂಡ ಪೃಥ್ವಿ ರೆಡ್ಡಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ವಿದ್ಯಾನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಮಂತ ಪಾಟೀಲ್ ಹಾಗೂ ಪೃಥ್ವಿ ರೆಡ್ಡಿ ನಡುವೆ ವಾಗ್ವಾದ ನಡೆದಿದ್ದು, ಹೆದ್ದಾರಿ ಮೇಲೆ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಇನ್ಸ್ ಪೆಕ್ಟರ್ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಹಾಗಾದ್ರೆ ನಾವು ನಾಡಗೀತೆ ಹಾಡಬಾರದಾ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿ, ಇದೆಲ್ಲ ಆಟ ಹಚ್ಚಬೇಡಿ ಎಂದು ವಿದ್ಯಾರ್ಥಿಗಳು ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಅಲ್ಲದೇ ನಾಡಗೀತೆ ಹಾಡಿ ಪ್ರತಿಭಟನೆ ನಡೆಸಿದ್ದಾರೆ.
ಕ್ಲಾಸಿನಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್