ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Dharwad News: ರಾಜ್ಯ ಸರ್ಕಾರದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ನಡೆ ಖಂಡಿಸಿ ಹಾಗೂ ಬೆಲೆ ಏರಿಕೆ ಹಿಂಪಡೆಯಲು ಅಗ್ರಹಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಕರೆಗೆ ಬೆಂಬಲಿಸಿ ಧಾರವಾಡದಲ್ಲಿ ಬಿಜೆಪಿ ಮುಖಂಡರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌

ವೈ- ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ ಬಿಜೆಪಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‌ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಈ ಸೇಡಿನಿಂದ ಹಾಗೂ ರಾಹುಲ್ ಗಾಂಧಿಯ ನಿರ್ದೇಶನ ಮೇರೆಗೆ ರಾಜ್ಯದಲ್ಲಿ ಡಿಸೇಲ್ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿದೆ.

ಜನತೆ ಈಗಾಗಲೇ ಸಂಕಷ್ಟದಲ್ಲಿರುವಾಗ, ಈ ರೀತಿ ಪೆಟ್ರೋಲ್ ಡಿಸೇಲ್ ಮೇಲಿನ ಟ್ಯಾಕ್ಸ್ ಏಕಾಏಕಿ ಏರಿಕೆ ಮಾಡಿದ್ದಾರೆ. ಇದರಿಂದ ಸಾರ್ವಜನಿಕರು ಮತ್ತಷ್ಟು ಸಂಕಷ್ಟಕ್ಕೆ ದೂಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಪ್ರಚಾರದ ಮೇಲೆ ಅಧಿಕಾರ ಹಿಡಿದಿರುವ ಈ ಸರ್ಕಾರ, ಈಗ ಬೆಲೆ ಏರಿಕೆ ಮೂಲಕ ಗ್ಯಾರಂಟಿ ಹೆಸರಿನಲ್ಲಿ ಕೊಟ್ಟಿರುವುದನ್ನು ವಸೂಲಿ ಮಾಡುತ್ತಿದೆ. ಈ ಕೂಡಲೇ ರಾಜ್ಯ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯನ್ನು ಹಿಂಒಡೆಯಬೇಕು, ಇಲ್ಲಾದಲ್ಲಿ ಇಂದಿನ ಸಾಂಕೇತಿಕ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

About The Author