Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುರುಬ ಸಮಾಜದ ಒಕ್ಕೂಟದಿಂದ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಡೆಯನ್ನು ಖಂಡಿಸಿ, ಹಾಗೂ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯಪಾಲರನ್ನು ರಾಷ್ಟ್ರಪತಿಗಳು ವಜಾಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.




