Thursday, July 25, 2024

Latest Posts

ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ

- Advertisement -

Hubballi News: ಹುಬ್ಬಳ್ಳಿ: ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಪಶುಪಾಲಕರ ಮತ್ತು ಕುರಿಗಾರರ‌ ಹಿತರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿಂದು ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ವತಿಯಿಂದ ನೂರಾರು ಕುರಿಗಳನ್ನು ಸೇರಿಸಿ ಪ್ರತಿಭಟನೆ ನಡೆಸಲಾಯಿತು.

ನಗರದ ತಹಶಿಲ್ದಾರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ನಂತರ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಪಶು ಸಂಗೋಪನೆ ಮತ್ತು ಕುರಿಗಾರಿಕೆಗಳನ್ನು ಮಾಡುತ್ತಿರುವ ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ‌‌. ಅಲ್ಲದೇ ನೂರಾರು ಪ್ರಕರಣಗಳು ರಾಜ್ಯದಲ್ಲಿ ನಡೆದಿವೆ.

ಗುಡ್ಡಗಾಡಿನಲ್ಲಿ ಕುರಿಯನ್ನು ಮೇಯಿಸಲು ಹೋದಾಗ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ನಿರಂತರವಾಗಿ ಕಿರುಕುಳ, ದೌರ್ಜನ್ಯಗಳು ನಡೆಯುತ್ತಿವೆ. ದೇಶಕ್ಕೆ ಸ್ವಾತಂತ್ರ್ಯ ಸಿಗುವ ಪೂರ್ವದಲ್ಲಿ, ಪ್ರಾಚೀನ ಕಾಲದಿಂದಲೂ ಬೆಟ್ಟಗುಡ್ಡಗಳಲ್ಲಿ ಪಶು ಸಂಗೋಪನೆ ಮತ್ತು ಕುರಿಗಾರಿಕೆಯನ್ನು ಮಾಡಿಕೊಂಡು ಬಂದಿರುವ ಜನರಿಗೆ ಆಯಾ ಪ್ರದೇಶದಲ್ಲಿ ಇಂದು ಅವರ ಬದುಕುವ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದರು.

ಸರ್ಕಾರವು ಪಶು ಸಂಗೋಪನೆ ಮತ್ತು ಕುರಿ ಕಾಯುವ, ಪಶುಪಾಲಕರ ಮತ್ತು ಕುರಿಗಾರರ ರಕ್ಷಣೆಗಾಗಿ ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನಾ ಸಂದರ್ಭದಲ್ಲಿ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಸಿದ್ದು ತೇಜಿ, ರಾಜ್ಯ ಸಂಚಾಲಕರಾದ ರವಿರಾಜ ಕಂಬಳಿ, ಯಲ್ಲಪ್ಪ ಹೆಗಡೆ ಸೇರಿದಂತೆ ಕುರಿಗಾಯಿಗಳು ಉಪಸ್ಥಿತರಿದ್ದರು.

ಇಸ್ಲಾಮಿಕ್ ಪವರ್ ಎಂದವನ ಮನೆಗೆ ಹೋಗಿ ರಾಮಮಂದಿರಕ್ಕೆ ಆಹ್ವಾನ ನೀಡಲು ನಿರ್ಧರಿಸಿದ ಶ್ರೀರಾಮಸೇನೆ

“ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?”

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?

- Advertisement -

Latest Posts

Don't Miss