ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .
ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ ಪ್ರದೇಶ ಸರ್ಕಾರ ಹೂಡಿರುವ ತಂತ್ರ , ರೈತರ ಹತ್ಯೆಗೆ ಉತ್ತರ ಪ್ರದೇಶದಲ್ಲಿ ಪೂರ್ವ ತಯಾರಿ ನಡೆದಿತ್ತು ಅಂತ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ರು. ಇನ್ನು ಕೂಡಲೇ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಉಚ್ಚಾಟಿಸಬೇಕು ಮತ್ತು ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು ಅಂತ ಒತ್ತಾಯಿಸಿದ್ರು.
ಇನ್ನು ಹೋರಾಟದಲ್ಲಿ ಹಲವು ರೈತ ಮುಖಂಡರು ಭಾಗವಹಿಸಿ ಐದು 10 ನಿಮಿಷಗಳ ಕಾಲ ರಸ್ತೆಯನ್ನು ತಡೆಗಟ್ಟಿ, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿದ್ರು. ಅಲ್ಲದೆ ಕೇಂದ್ರ ಸರ್ಕಾರ ಕೂಡಲೇ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಸಂಪತ್ ಶೈವ, ಕರ್ನಾಟಕ ಟಿವಿ. ಬೆಂಗಳೂರು