ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆ ಧಾರವಾಡದಲ್ಲಿ ಪ್ರೊಟೆಸ್ಟ್

Dharwad News: ಧಾರವಾಡ: ಧಾರವಾಡದಲ್ಲಿ ರಾಜ್ಯಪಾಲರ ನಡೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸುಕ್ಯೂಷನ್ ಅನುಮತಿ ಹಿನ್ನೆಲೆ ಪ್ರೊಟೆಸ್ಟ್ ನಡೆಸಿದ್ದು, ಹುಬ್ಬಳ್ಳಿ- ಧಾರವಾಡ ಮಾಹಾನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆದಿದೆ. ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆದಿದ್ದು, ರಾಜ್ಯಪಾಲರು ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ರಾಜ್ಯಪಾಲರು ಕೇಂದ್ರ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಜನಾರ್ಶೀವಾದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ರಾಜ್ಯಪಾಲರ ಮೂಲಕ ಸುಭದ್ರ ಸರ್ಕಾರ ಕೆಡವಲು ಹುನ್ನಾರ ನಡೆಸಲಾಗುತ್ತಿದೆ. ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ ಜನಪ್ರಿಯತೆ ತಡೆಯಲು ಬಿಜೆಪಿ‌ ಆಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಸರ್ಕಾರ ಕೆಡವಿ ಹಿಂಬಾಗಿಲಿನಿಂದ ಅಧಿಕಾರ ಹಿಡೊಯಲು ಯತ್ನಿಸುತ್ತಿದೆ. ಈ ಕೂಡಲೇ ರಾಷ್ಟ್ರಪತಿಗಳು ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೊನರೆಡ್ಡಿ ಸೇರಿ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.

About The Author