Hubli News: ಹುಬ್ಬಳ್ಳಿ: ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಮ್ಮ ಕರ್ನಾಟಕ ಸೇನೆ, ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿತು. ನಮ್ಮ ಕರ್ನಾಟಕ ಸೇನೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಅಮೃತ ಇಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಜ.25, 1984 ರಂದು ಡಾ|| ಸರೋಜಿನಿ ಮಹಿಷಿ ನೇತೃತ್ವದಲ್ಲಿ ಸಮಿತಿ ರಚನೆಯಾಗಿತ್ತು. ಫೆ. 30, 1986 ರಲ್ಲಿ ಸದರಿ ಸಮಿತಿಯು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಆದರೆ ಇದುವರೆಗೂ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಬಂದಿಲ್ಲ. ಇದರಿಂದ ಮೂಲ ಕರ್ನಾಟಕ ನಿವಾಸಿಗಳಿಗೆ ಅನ್ಯಾಯವಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗ ಸಿಗದೇ ನಿರುದ್ಯೋಗ ಹೆಚ್ಚಾಗುತ್ತಿದೆ.
ತಮಿಳುನಾಡಿನಲ್ಲಿ ಸ್ಥಳೀಯ ಭಾಷಿಕರಿಗೆ ಶೇ 90 ರಷ್ಟು, ಆಂಧ್ರದಲ್ಲಿ ಶೇ 80 ರಷ್ಟು ಉದ್ಯೋಗ ಮೀಸಲಾತಿ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ಇದೂ ಇಲ್ವೇಇಲ್ಲಾ. ರಾಜಕೀಯ ಪಕ್ಷಗಳ ಇಚ್ಛಾಶಕ್ತಿ ಕೊರತೆಯಿಂದ ಪರಿಷ್ಕೃತ ವರದಿ ಜಾರಿಯಾಗಿಲ್ಲ. ಹಾಗಾಗಿ ಕೂಡಲೇ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ, ಈ ಆದೇಶ ಜಾರಿಯಾಗದೇ ಇದ್ದಲ್ಲಿ, ಉಗ್ರಹೋರಾಟಕ್ಕೆ ಮುಂದಾಗುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.



