- Advertisement -
Dharwad News: ಧಾರವಾಡ: ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲವೆಂದು ಜನರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮಸ್ಥರು ಈ ರೀತಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದು, ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಿದ್ದಾರೆ.
ಸರಿಯಾದ ಸಮಯಕ್ಕೆ ಬಸ್ ಬರದೇ, ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ತೊಂದರೆಯುಂಟಾಗುತ್ತಿದೆ. ಈ ಕಾರಣಕ್ಕೆ, ಬಸ್‌ಗಳನ್ನು ತಡೆದು ಜನ ಆಕ್ರೋಶ ಹೊರಹಾಕಿದ್ದಾರೆ. ಕೆಲ ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿತ್ತು.
- Advertisement -

