www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು.
ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸೋ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನಸಾಮಾನ್ಯರಿಗೆ ಹೊಸ ಭರವಸೆ ಮೂಡಿಸಿತ್ತು. ಆದ್ರೆ ಇದೇ ಸರ್ಕಾರವೀಗ ಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ ಬರೆ ಹಾಕುತ್ತಿದೆ. ಕಾಂಗ್ರೆಸ್ ಅಧಿಕಾರ ವೇಳೆ ಗ್ಯಾಸ್ ಸಿಲಿಂಡರ್ ಬೆಲೆ ಬಡವರಿಗೆ ಕೈಗೆಟ್ಟುವ ದರದಲ್ಲಿ 430ರಿಂದ 500 ರೂಪಾಯಿಯೊಳಗೆ ಗ್ಯಾಸ್ ಸಿಲಿಂಡರ್ ಲಭ್ಯವಾಗುತ್ತಿತ್ತು. ಆದ್ರೆ ಒಂದು ಗ್ಯಾಸ್ ಸಿಲಿಂಡರ್ ಒಂದು ಸಾವಿರ ರೂಪಾಯಿಗೆ ಏರಿಕೆಯಾಗಿದೆ. ಇದರಿಂದ ಜೀವನೋಪಾಯಕ್ಕೆ ಇನ್ನುಳಿದ ವಸ್ತುಗಳ ಖರೀದಿಸಲು ಹಣವಿಲ್ಲದೆ ಜನ ಸಾಮಾನ್ಯರಿಗೆ ಸಂಕಷ್ಟ ಎದುರಿಸುವ ಸ್ಥಿತಿ ಎದುರಾಗಿದೆ ಅಂತ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸರ್ಕಾರ ಬೆಲೆ ನಿಯಂತ್ರಿಸುವ ಮೂಲಕ ಏರಿಕೆ ಮಾಡಿರುವ ಅಡುಗೆ ಅನಿಲ, ನಿತ್ಯ ಬಳಕೆ ವಸ್ತುಗಳ ಬೆಲೆ ಇಳಿಕೆ ಮಾಡಬೇಕು ಅಂತ ಒತ್ತಾಯಿಸಿದ್ರು. ಒಂದು ವೇಳೆ ಸರ್ಕಾರ ಬೆಲೆ ಇಳಿಕೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ವಿಧಾನಸಭೆ ಮುತ್ತಿಗೆ ಹಾಕುವ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು