- Advertisement -
www.karnatakatv.net: ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗಲಾಪೂರು ಗ್ರಾಮದ ಹುಲಿಗೇಮ್ಮ ಎಂಬ ದಲಿತ ಮಹಿಳೆಯೋಬ್ಬಳು ನಮಗೆ ಆಶ್ರಯ ಮನೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ನಮಗೆ ಮೂಲಭೂತ ಸೌಕರ್ಯ ಒದಗಿಸಿಕೊಂಡಿ ಇಲ್ಲವೇ ವಿಷ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದಾಳೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯುತ್ತಿದ್ದು. ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಮ್ಮಗೆ ಮೂಲಭೂತ ಸೌಕರ್ಯ ಒದಗಿಸಿಕೊಡಲು ಸಂಪೂರ್ಣ ವಿಫಲವಾಗಿದ್ದು ಜೀವನ ನಡೆಸಲು ತುಂಬಾ ಕಷ್ಟವಾಗಿದೆ ನಮ್ಮಗೆ ಸಾಯಲು ವಿಷ ಕೊಡಿ ಎಂದು ಅಧಿಕಾರಿಗಳ ಮುಂದೆ ಅಂಗಲಾಚಿ ಬೇಡಿಕೊಂಡಳು. ನಂತರ ಅಧಿಕಾರಿಗಳು ಆ ಮಹಿಳೆಯ ಎಲ್ಲಾ ಸಮಸ್ಯೆ ಗಳನ್ನು ಬಗೆಹರಿಸುವುದಾಗಿ ಸಮಾಧಾನ ಮಾಡಿದರು.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು
- Advertisement -

