ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಹಗರಣ ದೃಢಪಟ್ಟ ಹಿನ್ನಲೆಯಲ್ಲಿ, ಇಡೀ ಪರೀಕ್ಷೆಯನ್ನೇ ಸರ್ಕಾರ ರದ್ದುಗೊಳಿಸಿದೆ. ಅಲ್ಲದೇ ಹಗರಣದಲ್ಲಿ ಭಾಗಿಯಾಗಿರುವಂತ ಆರೋಪಿಗಳ ಹೊರತಾಗಿ ಇತರರಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಈ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಅರಗ ಜ್ಞಾನೇಂದ್ರ, ಕಲಬುರ್ಗಿ, ಬೆಂಗಳೂರು ಪರೀಕ್ಷಾ ಕೇಂದ್ರ ಸೇರಿದಂತೆ ಹಲವೆಡೆ ಪಿಎಸ್ಐ ನೇಮಕಾತಿಗಾಗಿ ನಡೆದಂತ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಸಾಭೀತಾಗಿದೆ. ಈ ನಿಟ್ಟಿನಲ್ಲಿ ಇಡೀ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ. ಜೊತೆಗೆ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದರು.
ಈ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿರುವಂತ ಆರೋಪಿಗಳನ್ನು ಹೊರತುಪಡಿಸಿ, ಇತರ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ 545 ಪಿಎಸ್ಐ ನೇಮಕಾತಿಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದರು.




