Sunday, October 20, 2024

Latest Posts

Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು

- Advertisement -

Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ.

ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ. ಆದೇಶ ಹೊರಡಿಸಿರುವ ಸರಕಾರದ ನಡೆಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

ಆತನನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿ ಕಾರಣಗಳಿಲ್ಲ ಎಂದು ಕರ್ನಾಟಕ ಸರಕಾರದ ಸಲಹಾ ಮಂಡಳಿ ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈತನ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದ ಪ್ರಕರಣ ದಾಖಲಾಗಿವೆ.

ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ರಾಮನಗರ ಜಿಲ್ಲೆಯ ಸಾತನೂರು ಬಳಿ ನಡೆದಿದ್ದ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಗೂಂಡಾ ಕಾಯ್ದೆಯಡಿ‌ ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿ, ಪುನೀತ್ ಬಂಧನಮುಕ್ತಗೊಳಿಸುವಂತೆ ಸೂಚಿಸಿದೆ. ಈ ವಿಚಾರಕ್ಕೆ ಈಗ ತೀವ್ರ ವಿರೋಧ ವ್ಯಕ್ತವಾಗಿದೆ.

Ganesh Fest : ಧರ್ಮ ದಂಗಲ್ ಮಧ್ಯೆ ಮುಸ್ಲಿಂ ಸರಕಾರಿ ನೌಕರನ ಸೌಹಾರ್ಧತೆ ಸಾರುವ ಕಥನ

MB Pateel : ಯಾರೂ ಕಾನೂನಿಗಿಂತ ಮೇಲಲ್ಲ : ಸಚಿವ ಎಂ.ಬಿ ಪಾಟೀಲ್

Ganesha Fest : ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಕಲ ತಯಾರಿ

- Advertisement -

Latest Posts

Don't Miss