www.karnatakatv.net: ಪುನೀತ್ ರಾಜ್ ಕುಮಾರ್ ಅವರು ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯಾದ್ಯಂತ ಆಕ್ರಂದನ ಮುಗಿಲು ಮುಟ್ಟಿದೆ. ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿನತ್ತ ಬರುತ್ತಿತ್ತಾರೆ.
ನಗರದ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಜತೆಗೆ ಸ್ಯಾಂಡಲ್ ವುಡ್ ಸೇರಿ ಭಾರತೀಯ ಚಿತ್ರರಂಗದ ವಿವಿಧ ಗಣ್ಯರು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪುನೀತ್ ಅವರ ಸ್ನೇಹಿತರು, ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ ಅಗಲಿದ ನಟನ ದರ್ಶನ ಪಡೆದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ನಡೆಸಲು ಪುನೀತ್ ಅವರ ಕುಟುಂಬ ವರ್ಗದೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇಂದು ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಅಧಿಕೃತ ಘೋಷಣೆಗಳು ಬಾಕಿ ಇದೆ. ಅಮೆರಿಕಾದಲ್ಲಿರುವ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ಧೃತಿ ಅವರು ಇಂದು ನಗರಕ್ಕೆ ವಾಪಸ್ಸಾಗುವ ಸಾಧ್ಯತೆಗಳಿವೆ.
ರಾತ್ರಿಯಿಡೀ ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಮಯ ಕಳೆದಂತೆ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇಂದು ಬೆಳಗಾಗುತ್ತಿದ್ದಂತೆ ಮತ್ತಷ್ಟು ಜನ ಕಂಠೀರವ ಸ್ಟೂಡಿಯೋ ಕಡೆಗೆ ಮುಖಮಾಡಿದ್ದು, ರಾಜ್ಯ, ಅಂತಾರಾಜ್ಯಗಳಿoದ ಜನರು ಕಂಠೀರವ ಸ್ಟುಡಿಯೋದತ್ತ ಬರುತ್ತಿದ್ದಾರೆ.