ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಿಶೋರ್ ಅವರ ಕುಟುಂಬಸ್ಥರ ಮಾಹಿತಿ ಪ್ರಕಾರ, ಹೈ ಬಿಪಿಯಿಂದ ಕೋಮಾ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಅವರಿಗೆ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜೇಮ್ಸ್ ಚಿತ್ರದ ಸೂಪರ್ ಸಕ್ಸಸ್‍ನ ನಂತರ ಕಿಶೋರ್ ಅವರು ಹೊಸ ಚಿತ್ರವನ್ನು ಸಹ ಮಾಡುತ್ತಿದ್ದರು. ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾವು ಈಗಾಗಲೇ ನೂರು ದಿನಗಳನ್ನು ಸಹ ಇತ್ತೀಚೆಗೆ ಪೂರೈಸಿತ್ತು. ಅಲ್ಲದೇ, ರಾಜ್ಯದಾದ್ಯಂತ ಈ ಸಿನಿಮಾಗೆ ಬಹಳ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿತ್ತು.