Sunday, December 22, 2024

Latest Posts

ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

- Advertisement -

www.karnatakatv.net: ಇಂದು ನೆರವೇರಬೇಕಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯನ್ನು ನಾಳೆಗೆ ಮುಂದೂಡಲಾಗಿದೆ. ಪುನೀತ್ ಅಂತಿಮ ದರ್ಶನಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಇನ್ನು ಪುನೀತ್ ಪುತ್ರಿ ದ್ರಿತಿ ಬೆಂಗಳೂರಿಗೆ ಆಗಮಿಸಲು ಸ್ವಲ್ಪ ತಡವಾಗಬಹುದು ಇದರಿಂದ ಸಂಜೆ ಬಳಿಕ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಸ್ವಲ್ಪ ಕಷ್ಟಕರವಾಗಲಿದೆ ಅನ್ನೋ ವಿಚಾರಗಳನ್ನ ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ. ಹೀಗಾಗಿ ನಾಳೆ ವರೆಗೂ ಅಪ್ಪು ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಸಿಕ್ಕಂತಾಗಿದೆ. ಇನ್ನು ಅಭಿಮಾನಿಗಳು ಯಾವುದೇ ಗೊಂದಲ ಮಾಡಿಕೊಳ್ಳದೆ, ಶಾಂತ ರೀತಿಯಿಂದ ಪುನೀತ್ ರಾಜ್ ಕುಮಾರ್ ರವರ ಅಂತಿಮ ದರ್ಶನ ಪಡೆಯಬೇಕು ಅಂತ ಸಿಎಂ ಬಸವರಾಜ ಬೊಮ್ಮಾಯಿ ಇದೇ ವೇಳೆ ಮನವಿ ಮಾಡಿಕೊಂಡಿದ್ದಾರೆ.

- Advertisement -

Latest Posts

Don't Miss