ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪೊಲೀಸ್ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಆದ್ರೆ, ಯಾವುದೇ ತಪ್ಪು ಮಾಡಿರದ, ಪ್ರಕರಣಕ್ಕೆ ಸಂಬಂಧವೇ ಇಲ್ಲದ ಅಧಿಕಾರಿಗಳನ್ನು, ಟ್ರಾನ್ಸ್‌ಫರ್ ಮಾಡಿದ್ದಾರೆಂಬ ಆರೋಪವೂ ಕೇಳಿಬರ್ತಿದೆ.
ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನ ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರಡಿಸಿರುವ ಗೃಹ ಇಲಾಖೆ, ಇನ್ನೂ ಯಾವುದೇ ಸ್ಥಳ ಸೂಚಿಸಿಲ್ಲ. ಮದ್ದೂರು ಪ್ರಕರಣದಲ್ಲಿ ತಿಮ್ಮಯ್ಯಗೆ ಹೆಚ್ಚುವರಿ ಜವಾಬ್ದಾರಿ ನೀಡಿರಲಿಲ್ಲ. ಆದರೂ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಲ್ಲು ತೂರಾಟ ತಡೆಯಬೇಕಿದ್ದು ಮದ್ದೂರು ಇನ್‌ಸ್ಪೆಕ್ಟರ್ ಹಾಗೂ ಇತರ ಪೊಲೀಸರ ಕರ್ತವ್ಯವಾಗಿತ್ತು. ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್‌ಪಿ. ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ. ತಿಮ್ಮಯ್ಯ ಕೇವಲ ಬಂದೋಬಸ್ತ್ ಕೆಲಸ ಮಾಡುತ್ತಿದ್ರು. ಹೀಗಿದ್ದರೂ ತಿಮ್ಮಯ್ಯರನ್ನು ವರ್ಗಾವಣೆ ಮಾಡಲಾಗಿದೆ.
ತಿಮ್ಮಯ್ಯ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ, ಅದೇ ಜಾಗಕ್ಕೆ ನವೀನ್ ಕುಮಾರ್‌ರನ್ನು ನೇಮಕ ಮಾಡಿದ್ದಾರೆ. ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನ, ಡಿಜಿಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.




